ಅದು 1999ರ ವಿಧಾನಸಭಾ ಚುನಾವಣೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾದ ಡಿ.ಬಿ. ಚಂದ್ರೇಗೌಡ ಸ್ಪರ್ಧಿಸಿದ್ದರು. ಈ ಹೊತ್ತಿಗಾಗಲೇ ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕಾಗಿ ಗಿರಿಜನರನ್ನು ಒಕ್ಕಲೆಬ್ಬಿಸಲು ಅಗತ್ಯವಿರುವ ಔಪಚಾರಿಕತೆಗಳನ್ನು ಪೂರೈಸಿಕೊಂಡಿದ್ದ ಅರಣ್ಯ ಇಲಾಖೆ `ಕಾರ್ಯಾಚರಣೆ'ಗೆ ಮುಂದಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನವನ್ನು ವಿರೋಧಿಸಿ ಆದಿವಾಸಿ ಗಿರಿಜನ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲೊಂದು ಹೋರಾಟ ನಡೆಯುತ್ತಿತ್ತು. ಚುನಾವಣೆಯನ್ನು ಬಹಿಷ್ಕರಿಸುತ್ತೇವೆಂಬ ಮಾತುಗಳನ್ನೂ ಹೋರಾಟಗಾರರು ಆಡಿದ್ದರು. ಈ ಹೊತ್ತಿನಲ್ಲಿ ಡಿ.ಬಿ. ಚಂದ್ರೇಗೌಡರ ಮಧ್ಯ ಪ್ರವೇಶವಾಯಿತು. `ಗಿರಿಜನರ ಹಿತ ಕಾಪಾಡುತ್ತೇನೆಂದು ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡಲು ಸಿದ್ಧ' ಎಂಬ ಭರವಸೆ ನೀಡಿದರು.
ಚುನಾವಣಾ ಫಲಿತಾಂಶಗಳು ಹೊರಬಿದ್ದವು. ಡಿ.ಬಿ. ಚಂದ್ರೇಗೌಡರು ಗೆದ್ದಿದ್ದರು. ಅವರ ಗೆಲುವಿಗೆ ಆದಿವಾಸಿ-ಗಿರಿಜನರು ಎಷ್ಟರ ಮಟ್ಟಿಗೆ ಕಾರಣರಾಗಿದ್ದರೋ ಗೊತ್ತಿಲ್ಲ. ಚಂದ್ರೇಗೌಡರು ಎಸ್.ಎಂ.ಕೃಷ್ಣ ಸರಕಾರದಲ್ಲಿ ಕಾನೂನು ಸಚಿವರಾಗಿದ್ದಂತೂ ನಿಜ. ತಮ್ಮ ಕ್ಷೇತ್ರದ ಶಾಸಕರೇ ಕಾನೂನು ಸಚಿವರಾದದ್ದನ್ನು ಕಂಡ ಆದಿವಾಸಿಗಳು ತಮ್ಮ ಸಮಸ್ಯೆ ಪರಿಹಾರವಾಗುತ್ತದೆಂದು ನಂಬಿದರು. ಆದರೆ ಚಂದ್ರೇಗೌಡರು ನಿಧಾನವಾಗಿ ತಮ್ಮ ಮಾತಿನ ವರಸೆಯನ್ನು ಬದಲಾಯಿಸಿದರು. ರಾಷ್ಟ್ರೀಯ ಉದ್ಯಾನವನ ಕಾಯ್ದೆಗೂ ರಾಜ್ಯ ಸರಕಾರಕ್ಕೂ ಸಂಬಂಧವಿಲ್ಲ. ಅದು ಕೇಂದ್ರ ಸರಕಾರದ ಕಾನೂನು, ನಮಗೇನೂ ಮಾಡಲು ಸಾಧ್ಯವಿಲ್ಲ. ಹೀಗೆ ನೂರೆಂಟು ತಾಂತ್ರಿಕ ಕಾರಣಗಳನ್ನು ಮುಂದೊಡ್ಡತೊಡಗಿದರು. read more »
Recent comments
3 weeks 6 hours ago
3 weeks 14 hours ago
3 weeks 3 days ago
3 weeks 4 days ago
3 weeks 4 days ago
4 weeks 18 hours ago
4 weeks 6 days ago
5 weeks 3 days ago
6 weeks 5 days ago
8 weeks 2 days ago