ಅದು 1999ರ ವಿಧಾನಸಭಾ ಚುನಾವಣೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾದ ಡಿ.ಬಿ. ಚಂದ್ರೇಗೌಡ ಸ್ಪರ್ಧಿಸಿದ್ದರು. ಈ ಹೊತ್ತಿಗಾಗಲೇ ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕಾಗಿ ಗಿರಿಜನರನ್ನು ಒಕ್ಕಲೆಬ್ಬಿಸಲು ಅಗತ್ಯವಿರುವ ಔಪಚಾರಿಕತೆಗಳನ್ನು ಪೂರೈಸಿಕೊಂಡಿದ್ದ ಅರಣ್ಯ ಇಲಾಖೆ `ಕಾರ್ಯಾಚರಣೆ'ಗೆ ಮುಂದಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನವನ್ನು ವಿರೋಧಿಸಿ ಆದಿವಾಸಿ ಗಿರಿಜನ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲೊಂದು ಹೋರಾಟ ನಡೆಯುತ್ತಿತ್ತು. ಚುನಾವಣೆಯನ್ನು ಬಹಿಷ್ಕರಿಸುತ್ತೇವೆಂಬ ಮಾತುಗಳನ್ನೂ ಹೋರಾಟಗಾರರು ಆಡಿದ್ದರು. ಈ ಹೊತ್ತಿನಲ್ಲಿ ಡಿ.ಬಿ. ಚಂದ್ರೇಗೌಡರ ಮಧ್ಯ ಪ್ರವೇಶವಾಯಿತು. `ಗಿರಿಜನರ ಹಿತ ಕಾಪಾಡುತ್ತೇನೆಂದು ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡಲು ಸಿದ್ಧ' ಎಂಬ ಭರವಸೆ ನೀಡಿದರು.
ಚುನಾವಣಾ ಫಲಿತಾಂಶಗಳು ಹೊರಬಿದ್ದವು. ಡಿ.ಬಿ. ಚಂದ್ರೇಗೌಡರು ಗೆದ್ದಿದ್ದರು. ಅವರ ಗೆಲುವಿಗೆ ಆದಿವಾಸಿ-ಗಿರಿಜನರು ಎಷ್ಟರ ಮಟ್ಟಿಗೆ ಕಾರಣರಾಗಿದ್ದರೋ ಗೊತ್ತಿಲ್ಲ. ಚಂದ್ರೇಗೌಡರು ಎಸ್.ಎಂ.ಕೃಷ್ಣ ಸರಕಾರದಲ್ಲಿ ಕಾನೂನು ಸಚಿವರಾಗಿದ್ದಂತೂ ನಿಜ. ತಮ್ಮ ಕ್ಷೇತ್ರದ ಶಾಸಕರೇ ಕಾನೂನು ಸಚಿವರಾದದ್ದನ್ನು ಕಂಡ ಆದಿವಾಸಿಗಳು ತಮ್ಮ ಸಮಸ್ಯೆ ಪರಿಹಾರವಾಗುತ್ತದೆಂದು ನಂಬಿದರು. ಆದರೆ ಚಂದ್ರೇಗೌಡರು ನಿಧಾನವಾಗಿ ತಮ್ಮ ಮಾತಿನ ವರಸೆಯನ್ನು ಬದಲಾಯಿಸಿದರು. ರಾಷ್ಟ್ರೀಯ ಉದ್ಯಾನವನ ಕಾಯ್ದೆಗೂ ರಾಜ್ಯ ಸರಕಾರಕ್ಕೂ ಸಂಬಂಧವಿಲ್ಲ. ಅದು ಕೇಂದ್ರ ಸರಕಾರದ ಕಾನೂನು, ನಮಗೇನೂ ಮಾಡಲು ಸಾಧ್ಯವಿಲ್ಲ. ಹೀಗೆ ನೂರೆಂಟು ತಾಂತ್ರಿಕ ಕಾರಣಗಳನ್ನು ಮುಂದೊಡ್ಡತೊಡಗಿದರು. read more »
ನನ್ನ ಹೆಸರು ಇಸ್ಮಾಯಿಲ್ ಎಂದಿರುವುದರಿಂದ ಅನೇಕ ಸಂದರ್ಭಗಳಲ್ಲಿ ನನಗೆ ಬೇಕಿಲ್ಲದಿದ್ದರೂ ನಾನು ಮುಸ್ಲಿಮರ ಪ್ರತಿನಿಧಿಯಾಗಿಬಿಡುತ್ತೇನೆ. ಮತ-ಧರ್ಮದ ಕುರಿತ ನನ್ನ ವೈಯಕ್ತಿಕ ನಿಲುವುಗಳ ಬಗ್ಗೆ ಅರಿವಿರುವ ಹತ್ತಿರದ ಗೆಳೆಯರನ್ನು ಹೊರತು ಪಡಿಸಿದರೆ ನಾನೊಬ್ಬ ಮುಸ್ಲಿಮ ಎಂಬ ಪೂರ್ವಗ್ರಹದೊಂದಿಗೆ ಚರ್ಚೆಗಿಳಿಯುವ ಅನೇಕರಿದ್ದಾರೆ. ಈ ಬಗೆಯ ಚರ್ಚೆಗಳಿಂದ ದೂರ ಉಳಿಯಲು ನಾನು ಪ್ರಯತ್ನಿಸಿದರೂ ಕೆಲವೊಮ್ಮೆ ಅದರಿಂದ ಪಾರಾಗಲು ಸಾಧ್ಯವಾಗುವುದಿಲ್ಲ. read more »
ಕರ್ನಾಟಕದಲ್ಲಿ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದದ್ದು ಮತ್ತು ಆ ಅವಧಿಯದ್ದಕ್ಕೂ ಕರ್ನಾಟಕ ಬರದ ಬಾಧೆಯನ್ನು ಅನುಭವಿಸಿದ್ದನ್ನು ಬಹುಶಃ ಯಾರೂ ಮರೆತಿರಲಿಕ್ಕಿಲ್ಲ. ಈ ಅವಧಿಯಲ್ಲಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಅವರ ಸಂಪುಟ ಸಹೋದ್ಯೋಗಿಗಳಾದ ಧರ್ಮಸಿಂಗ್, ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಕೇಂದ್ರ ಸರಕಾರ ಬರ ಪರಿಹಾರಕ್ಕೆ ಅಗತ್ಯವಿರುವ ಸಂಪನ್ಮೂಲವನ್ನು ಒದಗಿಸುತ್ತಿಲ್ಲ ಎಂದು ಮೇಲಿಂದ ಮೇಲೆ ಹೇಳಿದ್ದೂ ಪತ್ರಿಕೆಗಳನ್ನು ಓದುವ, ಟಿ.ವಿ.ನೋಡುವ ಎಲ್ಲರಿಗೂ ನೆನಪಿರಬೇಕು.ಆಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರಕಾರವಿತ್ತು. ಕರ್ನಾಟಕದ ಅನಂತಕುಮಾರ್ ಮತ್ತು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ವೆಂಕಯ್ಯ ನಾಯ್ಡು ಕೇಂದ್ರ ಸಚಿವ ಸಂಪುಟದಲ್ಲಿದ್ದರು. ಕೇಂದ್ರದ ನೆರವಿಗೆ ಸಂಬಂಧಿಸಿದಂತೆ ಕರ್ನಾಟಕದ ಅಧಿಕಾರಾರೂಢ ಕಾಂಗ್ರೆಸ್ಸಿಗರ ಟೀಕೆ ಹೆಚ್ಚುತ್ತಲೇ ಹೋದಾಗ ಇಬ್ಬರೂ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದರು. ಕೇಂದ್ರ ಬರ ಪರಿಹಾರಕ್ಕೆಂದು ಒದಗಿಸಿದ್ದ ಹಣವನ್ನು ರಾಜ್ಯ ಸರಿಯಾಗಿ ಬಳಸಿಕೊಂಡಿಲ್ಲ. ಬಹಳಷ್ಟು ಹಣ ಬಳಸದೆಯೇ ಲ್ಯಾಪ್ಸ್ (laps) ಆಗಿದೆ ಎಂದಲ್ಲಾ ಗದ್ದಲವೆಬ್ಬಿಸಿದ್ದರು. ಇದಕ್ಕೆ ಕರ್ನಾಟಕದಲ್ಲಿ ವಿರೋಧ ಪಕ್ಷವಾಗಿದ್ದ ಬಿಜೆಪಿಯ ಜಗಧೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮುಂತಾದವರೆಲ್ಲಾ ಧ್ವನಿಗೂಡಿಸಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. read more »
ಕಿರುತೆರೆಯ ಸ್ಟಾರ್ ನಿರ್ದೇಶಕ ಟಿ ಎನ್ ಸೀತಾರಾಂ 'ಮೀರಾ ಮಾಧವ ರಾಘವ' ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. ಈ ಚಿತ್ರದ ಪ್ರೀಮಿಯರ್ ಪ್ರದರ್ಶನಕ್ಕೇ ಹೋಗಿದ್ದೆ. ನೋಡಿ ನಿರಾಶೆಯಾಯಿತು. read more »
ನಾವಿನ್ನೂ ಚಿಕ್ಕವರು. ನಾನು ಐದನೇ ಕ್ಲಾಸಿನಲ್ಲಿದ್ದೆ ಎನಿಸುತ್ತದೆ. ನಮ್ಮ ಅಪ್ಪನಿಗೆ ಒಂದು ಕಿರಾಣಿ ಅಂಗಡಿಯಿತ್ತು. ಪ್ರತೀ ಮಂಗಳವಾರ ನಸುಕಿಗೇ ಎದ್ದು ಅಪ್ಪ ಸೈಕಲ್ ಹತ್ತಿ ಹಾಸನದ ಸಂತೆಗೆ ಹೊರಡುತ್ತಿದ್ದರು. ವಾರವಿಡೀ ಅಂಗಡಿಗೆ ಬೇಕಾದ ಸರಕನ್ನೆಲ್ಲಾ ಆ ದಿನ ಸಂತೆಯಲ್ಲಿ ಖರೀದಿಸಿ ಗಾಡಿ ರಾಜಣ್ಣನ ಗಾಡಿಗೆ ತುಂಬಿಸಿ ರಾತ್ರಿ ಎಂಟು ಗಂಟೆಗೆ ಗಾಡಿಯ ಜತೆಗೇ ಮನೆಗೆ ಹಿಂದಿರುಗುತ್ತಿದ್ದರು. ಮಂಗಳವಾರವಿಡೀ ಅಪ್ಪ ಮನೆಯಲ್ಲಿ ಇರುತ್ತಿರಲಿಲ್ಲವಾದ್ದರಿಂದ ಶಾಲೆಯಿಂದ ಹಿಂದಿರುಗಿದ ತಕ್ಷಣ ನಾನೂ ನನ್ನ ತಮ್ಮ ಮನೆಯಲ್ಲಿರುವ ರೇಡಿಯೋ, ಗಡಿಯಾರ, ಮೂಲೆಯಲ್ಲಿ ಮುಸುಕು ಹೊದ್ದು ತಣ್ಣಗೆ ಕುಳಿತಿರುತ್ತಿದ್ದ ನೀರೆತ್ತುವ ಡೀಸೆಲ್ ಪಂಪ್‌ಗಳ `ತಂತ್ರಜ್ಞಾನ'ವನ್ನು ಅರಿಯಲು ಹರಸಾಹಸ ಮಾಡುತ್ತಿದ್ದೆವು. ಅಮ್ಮನ ಕಣ್ಣು ತಪ್ಪಿಸಿ ಮಾಡುವ ಈ ಕೆಲಸಕ್ಕಾಗಿ ನಾವು ಬಳಸುತ್ತಿದ್ದ ತಂತ್ರಗಳದ್ದೇ ಒಂದು ದೊಡ್ಡ ಕಥೆಯಾಗಿಬಿಡುತ್ತದೆ. read more »





Recent comments
1 week 5 days ago
3 weeks 3 days ago
8 weeks 1 day ago
8 weeks 2 days ago
9 weeks 2 hours ago
9 weeks 4 days ago
10 weeks 10 hours ago
10 weeks 1 day ago
10 weeks 1 day ago
14 weeks 14 hours ago